ದೊಡ್ಮನೆಯಲ್ಲಿ ವಿಚ್ಛೇದನದ ಸದ್ದು: ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು

ವರನಟ ಡಾ.ರಾಜಕುಮಾರ್ ಮೊಮ್ಮಗ ಹಾಗೂ ನಟ ರಾಘವೇಂದ್ರ ರಾಜಕುಮಾರ್ ಪುತ್ರ ನಟ ಯುವ ರಾಜಕುಮಾರ್ ಅವರು 2019ರಲ್ಲಿ ಶ್ರೀದೇವಿ ಅವರೊಂದಿಗೆ ಮದುವೆ ಆಗಿದ್ದರು. ವೈಯಕ್ತಿಕ ಕಾರಣಗಳಿಂದ ಅವರ ಐದು ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಪತ್ನಿಗೆ ಯುವ ಅವರು ನೋಟಿಸ್ ನೀಡಿದ್ದಾರೆ.

ಸದ್ಯ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿಯವರು ವಿದೇಶದಲ್ಲಿದ್ದಾರೆ. ಆರು ತಿಂಗಳ ಹಿಂದೆ ಶ್ರೀದೇವಿಯಿಂದ ವಿಚ್ಛೇದನಕ್ಕೆ ಕೋರಿ ಯುವ ರಾಜಕುಮಾರ್ ಅವರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಪ್ರಕ್ರಿಯೆಯಂತ ಇದೀಗ ಪತ್ನಿಗೆ ನೋಟಿಸ್ ಜಾರಿಯಾಗಿದೆ ದಾಂಪತ್ಯ ಕಲಹ ವಿಚಾರ, ವಿಚ್ಛೇದನ ವಿಚಾರವಾಗಿ ಮೇರು ನಟ ಡಾ.ರಾಜಕುಮಾರ್ ಕುಟುಂಬದಲ್ಲಿ ಮುನ್ನೆಲೆಗೆ ಬಂದ ಮೊದಲ ನಟ ಎನ್ನಬಹುದಾಗಿದೆ. ಈ ವರೆಗೆ ಅವರ ಕುಟುಂಬದಲ್ಲಿ ಈ ವಿಚಾರವಾಗಿ ಯಾರೊಬ್ಬರು ಮುನ್ನೆಲೆ ಬಂದಿಲ್ಲ.


ಈ ವಿಚಾರ ತಿಳಿದ ಡೊಡ್ಮನೆ ಕುಟುಂಬ ಹಾಗೂ ಯುವ ರಾಜಕುಮಾರ್ ಅಭಿಮಾನಿಗಳಿಗೆ ಭರಸಿಡಿಲು ಬಡಿದಂತಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!