ರಾಜ್ಯದ ಮುಂದಿನ ಸಿಎಂ ಯಾರು ಗೊತ್ತಾ…? ಕಾರಹುಣ್ಣಿಮೆಯ ದಿನ ಎತ್ತಿನ ಬಳಿ ಸಿಎಂ ಕೂಗಿಗೆ ಉತ್ತರ

 

ದಾವಣಗೆರೆ: ರಾಜ್ಯದಲ್ಲಿ ‘ಮುಂದಿನ ಸಿಎಂ ಸಿದ್ದರಾಮಯ್ಯ’ ಎನ್ನುವ ಕೂಗು ಶುರುವಾಗಿದ್ದು, ಆ ಕೂಗು ಕಾರಹುಣ್ಣಿಮೆಯಲ್ಲೂ ಪ್ರತಿಧ್ವನಿಸಿದೆ!

ಉತ್ತರ ಕರ್ನಾಟಕದ ಭಾಗಗಳಲ್ಲಿ ಕಾರಹುಣ್ಣಿಮೆಯಂದು ಎತ್ತುಗಳಿಗೆ ಸಿಂಗರಿಸಿ ಅದ್ಧೂರಿ ಮೆರವಣಿಗೆ ಮಾಡುವ ಸಂಪ್ರದಾಯ ಮೊದಲಿನಿಂದಲೂ ಬೆಳೆದುಕೊಂಡು ಬಂದಿದ್ದು, ಈ ಬಾರಿ ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಎತ್ತುಗಳ ಮೇಲೆ ‘ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಬರೆಯಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದ ಕಾರ ಹುಣ್ಣಿಮೆಯು, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದ್ದು, ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಆದರೆ, ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅಭಿಮಾನಿಗಳು ‘ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಬರೆದಿದ್ದಾರೆ.

ತಿಮ್ಮಾಪುರ ಗ್ರಾಮದಲ್ಲಿ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಬರವಣಿಗೆಯೊಂದು ಎಲ್ಲರ ಗಮನ ಸೆಳೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!