ಹಿಜಾಬ್ ಅರ್ಜಿ ತುರ್ತು ವಿಚಾರಣೆ ಅಗತ್ಯವಿದೆಯೇ? ಸುಪ್ರೀಂಕೋರ್ಟ್
ಬೆಂಗಳೂರು: ಹಿಜಾಬ್‌ಗೆ ಸಂಬಂಧಪಟ್ಟಂತೆ ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಬುಧವಾರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾರ್ಚ್ 21ರ ಬಳಿಕ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರಿಂಕೋರ್ಟ್ ಹೇಳಿದೆ. ಗುರುವಾರದಿಂದ ಸುಪ್ರೀಂಕೋರ್ಟ್ಗೆ ರಜೆ ಇದ್ದು, ಹೋಳಿ ಹಬ್ಬದ ಬಳಿಕ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಅರ್ಜಿ ಬುಧವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಪೀಠದ ಮುಂದೆ ಬಂದಿತು. ಆಗ ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಮುಂದಿನ ವಾರ ವಿಚಾರಣೆ ನಡೆಸಬಹುದೇ? ಎಂದು ಕೇಳಿದರು. ವಕೀಲ ಸಂಜಯ ಹೆಗಡೆ ಅರ್ಜಿಯ ತುರ್ತು ವಿಚಾರಣೆಗಾಗಿ ಮನವಿ ಮಾಡಿದ್ದರು. ಹೋಳಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಅರ್ಜಿಯ ತುರ್ತು ವಿಚಾರಣೆಗೆ ಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಉಡುಪಿ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಯನ್ನು ಮಂಗಳವಾರ ಸಂಜೆ ಸಲ್ಲಿಸಲಾಗಿತ್ತು. ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು.