ಯಡಿಯೂರಪ್ಪ ಬಗ್ಗೆ ಪ್ರಶ್ನೆ ಕೇಳಬೇಡಿ: ಯತ್ನಾಳ್

ವಿಜಯಪುರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕುರಿತಂದೆ ನನಗೆ ಪ್ರಶ್ನೆಗಳನ್ನೆ ಕೇಳಬೇಡಿ, ಅವರ ಬಗ್ಗೆ ಅಪಾರ ಗೌರವ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಜೊತೆ ರಾಜಿ ಮಾಡಿಕೊಂಡಿಲ್ಲ. ಆದರೆ, ಪಕ್ಷದ ಸೂಚನೆ ಮೇರೆಗೆ ಅವರೊಂದಿಗಿನ  ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ಇಡುತ್ತೇನೆ ಎಂದು ಹೇಳಿದ್ದಾರೆ.
ಯಡಿಯೂರಪ್ಪಗೆ ಬಯ್ಯೋದು ಬೇಡ ಅವರು ಹಿರಿಯರು ಇದ್ದಾರೆ. ಅವರ ಬಗ್ಗೆ ಮಾತನಾಡಬೇಡಿ ಎಂದು ಹೈಕಮಾಂಡ್ ಸೂಚಿಸಿದೆ ಎಂದರು. ಚಿಲ್ಲರೆ ರಾಜಕಾರಣಿಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆಯೂ ಹೈಕಮಾಂಡ್ ಸೂಚಿಸಿದೆ ಎಂದರು.
ಪಕ್ಷದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ನೀಡಲಾಗಿದೆ ಎಂಬ ಊಹಾಪೋಹಗಳು ಏಕೆ ಏಳ್ತಿದ್ದಾವೆ ಗೊತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು. ವಿಜಯಪುರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯಕ್ರಮಕ್ಕೆ‌ ಗೈರಾದ ಕುರಿತು ಪ್ರತಿಕ್ರಿಯೆ ನೀಡಿದ ಯತ್ನಾಳ, ನಾನು ನಡ್ಡಾ ಅವರಿಂದ ಅನುಮತಿ ಪಡೆದೇ ಕಾರ್ಯಕ್ರಮಕ್ಕೆ ಗೈರಾಗಿದ್ದೆ ಎಂದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!