ದಾವಣಗೆರೆ :ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 13ಕ್ಕೆ ಬಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಸ್ಪಷ್ಟ ಬಹುಮತ ನೀಡುವ ಮೂಲಕ ಆಡಳಿತ ಮಾಡುವ ಅವಕಾಶ ನೀಡಿದ್ದಾರೆ, ಫಲಿತಾಂಶ ಬಂದು ಇನ್ನೂ ಮೂರು ದಿನಗಳು ಮಾತ್ರ ಆಗಿದ್ದು ಬಿಜೆಪಿಯ ಸ್ಥಳೀಯ ನಾಯಕರು ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸುವ ಮೂಲಕ ಸ್ಪಷ್ಟ ಬಹುಮತ ನೀಡಿದ ಮತದಾರರಿಗೆ ಅವಮಾನಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ ಖಂಡಿಸಿದ್ದಾರೆ.
ಈ ಹಿಂದೆ ಆಪರೇಷನ್ ಕಮಲ ಮಾಡುವ ಮೂಲಕ ಆಡಳಿತ ನಡೆಸುತ್ತಿದ್ದ ಸರ್ಕಾರವನ್ನು ಕೆಡವಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ತನ್ನ ಸರ್ಕಾರ ರಚನೆ ಮಾಡಿದ್ದನ್ನು ಮರೆತಿದೆ ಬಹುಷ್ಯ ರಾಷ್ಟ್ರಪತಿ ಆಡಳಿತ ವಿಧಿಸುವುದಕ್ಕೆ ಆ ಸಂದರ್ಭ ಸೂಕ್ತವಾಗಿತ್ತು ಎಂಬುದನ್ನು ಬಿಜೆಪಿ ನಾಯಕರು ಮರೆತಿದ್ದಾರೆ.
ಬಿಜೆಪಿ ನಾಯಕರು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರನ್ನು ಬಹುಮತ ಬಂದು ಎಷ್ಟು ದಿನಗಳ ನಂತರ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂಬುದನ್ನು ಒಮ್ಮೆ ನೆನಪಿಸಿಕೊಂಡರೇ ಒಳ್ಳೆಯದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
