ಡಾ|| ಎಸ್ಸೆಸ್ ಅವರಿಂದ ಅರ್ಹ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಡಾ|| ಎಸ್ಸೆಸ್ ಅವರಿಂದ ಅರ್ಹ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು ವಿತರಿಸಿದರು. ಇಂದು ಜಿಲ್ಲಾ ಸಚಿವರ ಗೃಹ ಕಛೇರಿ ಆವರಣದಲ್ಲಿ ನಡೆದ ಸರಳ ಕಾರ‍್ಯಕ್ರಮದಲ್ಲಿ ದ್ವಿಚಕ್ರಗಳನ್ನು ವಿತರಿಸಿ ಮಾತನಾಡಿದ ಶಾಸಕರು ಫಲಾನುಭವಿಗಳು ವಾಹನಗಳನ್ನು ತಮ್ಮ ದುಡಿಮೆಗೆ ಬಳಸಿಕೊಂಡು ಸಬಲರಾಗಿ ಎಂದು ಕರೆ ನೀಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಾವಣಗೆರೆ ಇವರಿಂದ  2022 -23 ನೇ ಸಾಲಿಗೆ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ಅರ್ಹ 10 ವಿಕಲಚೇತನ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಜಿಲ್ಲೆಯ ಅರ್ಹ ವಿಕಲಚೇತನರಿಗೆ ವಾಹನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ|| ಪ್ರಕಾಶ್ ಅಡಿಗ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!