ಡಾ. ಪ್ರಭಾ ಮಲ್ಲಿಕಾರ್ಜುನ್ ರವರಿಂದ ಎಂಸಿಸಿ ಬಿ ಬ್ಲಾಕ್ ನಲ್ಲಿ ಮನೆ ಮನೆ ಪ್ರಚಾರ.

ದಾವಣಗೆರೆ: ದಾವಣಗೆರೆ ಮಹಾ ನಗರ ಪಾಲಿಕೆ ವ್ಯಾಪ್ತಿಯ 38ನೇ ವಾರ್ಡ್ ಎಂಸಿಸಿ ಬಿ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಎಸ್ ಮಲ್ಲಿಕಾರ್ಜುನ್ ರವರ ಪರವಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಇಂದು ಬೆಳಗ್ಗೆ 8 ಗಂಟೆಯಿಂದ ಎಂಸಿಸಿ ಬಿ ಬ್ಲಾಕ್ ನ 2.3.4 ಹಾಗೂ 5 ನೇ ಮುಖ್ಯ ರಸ್ತೆಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.
ಮಲ್ಲಿಕಾರ್ಜುನ್ ರವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ, ಅವರಿಗೆ ಇನ್ನೊಮ್ಮೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿದರು. ಈ ಸಂದರ್ಭದಲ್ಲಿ ಸಮರ್ಥ್ ಶಾಮನೂರು, ಪಾಲಿಕೆ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.