ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಸದಸ್ಯರಾಗಿ ಆಯ್ಕೆ.
ದಾವಣಗೆರೆ: ನಗರದ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ಆಯ್ಕೆಯಾದ್ದಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಕಟ ಪೂರ್ವ ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ಭೀಮಣ್ಣ . ಸುಣಗಾರ್ , ನಿಕಟ ಪೂರ್ವ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ತಿಪ್ಪಾರೇಡ್ಡಿ , ನಿಕಟ ಪೂರ್ವ ಪ್ರಾಂಶುಪಾಲರುಗುಳಾದ ಪ್ರೊ ಶಂಕರ್ . ಶೀಲಿ, ಪ್ರೊ ಬಸವರಾಜ ಡಿ , ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ ಮಂಜಣ್ಣ ಎಂ ,ಹಳೇ ವಿದ್ಯಾರ್ಥಿ ಸಂಘದ ಅದ್ಯಕ್ಷರಾದ ರಾಮಪ್ರಸಾದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ