Dr Prabha Mallikarjun: ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ.ಜ.20; (Dr Prabha Mallikarjun) ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರೊಂದಿಗೆ ಚೆನ್ನೈ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆಯಲ್ಲಿ ಕೇಂದ್ರ ಸರ್ಕಾರ ಆರೋಗ್ಯಕ್ಷೇತ್ರದಲ್ಲಿ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಎಲ್ಲಾ ಯೋಜನೆಗಳು ಸಾಮಾನ್ಯ ಜನರಿಗೆ ತಲುಪಲು ಅನುಸರಿಸಬೇಕಾದ ಮಾರ್ಗ ಸೂಚಿಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಲಾಯಿತು. ಇದರೊಂದಿಗೆ ಅನುಸರಿಸಬೇಕಾದ ಮಾರ್ಗಸೂಚನೆಗಳ ಬಗ್ಗೆ ತಿಳಿಸಲಾಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಸಂಸತ್ ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೊ.ರಾಮ್ ಗೋಪಾಲ್ ಯಾದವ್ ವಹಿಸಿದ್ದರು.
ಸಭೆಯಲ್ಲಿ ಸಮಿತಿಯ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಉಪಸ್ಥಿತರಿದ್ದರು ಎಂದು ಸಂಸದರ ಆಪ್ತ ಸಹಾಯಕರಾದ ಹರೀಶ್ ಕೆ.ಎಲ್ ಬಸಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.