ಜಗಳೂರು ತಾಲೂಕಿನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಬಿರುಸಿನ ಪ್ರಚಾರ

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ಜಗಳೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ತಾಲೂಕಿನ ಬಸವನಕೋಟೆ ಪಲ್ಲಾಗಟ್ಟೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದ ಪ್ರಭಾ ಮಲ್ಲಿಕಾರ್ಜುನ ಅವರು ಜಗಳೂರು ತಾಲೂಕಿನ ಜನರು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಬಾರಿ ಸಹ ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಕಾರ್ಯಕರ್ತರು ಯೋಜನೆಗಳ ಬಗ್ಗೆ ಪ್ರತಿ ಮನೆಮನೆಗೂ ತಲುಪಿಸಬೇಕೆಂದು ಕರೆ ನೀಡಿದರು.

ಐದು ಬಾರಿ ಬಿಜೆಪಿಗೆ ಅಧಿಕಾರ ನೀಡಿದ್ದರು ಸಹ ಲೋಕಸಭಾ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ನನಗೆ ಒಂದು ಬಾರಿ ಅವಕಾಶ ನೀಡಿದರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.

ಶಾಸಕರಾದ ದೇವೇಂದ್ರಪ್ಪನವರು ಮಾತನಾಡಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಭಾ ಮಲ್ಲಿಕಾರ್ಜುನ ಪರ ಅಲೆ ಇದ್ದು ಜಗಳೂರು ತಾಲೂಕಿನಲ್ಲಿ ಅತಿ ಹೆಚ್ಚಿನ ಮತಗಳನ್ನು ನೀಡುವ ಮೂಲಕ ದೆಹಲಿಗೆ ಕಳಿಸೋಣ ಎಂದು ತಿಳಿಸಿದರು.

ಈ ಬೃಹತ್ ಪ್ರಚಾರ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ಶಿವಕುಮಾರ್ ಓಡೆಯರ್, ಕೆ.ಪಿ.ಪಾಲಯ್ಯ, ಜಗಳೂರು ತಾಲೂಕಿನ ಮುಖಂಡರು, ಜನಪ್ರತಿನಿಧಿಗಳು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!