ಜಿಎಂಐಟಿ ಪ್ರಾಂಶುಪಾಲರಾಗಿ ಡಾ.ಸಂಜಯ್ ಪಾಂಡೆ ಅಧಿಕಾರ ಸ್ವೀಕಾರ
ದಾವಣಗೆರೆ: ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ ಸಂಜಯ್ ಪಾಂಡೆ ಎಂ.ಬಿ. ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರುಗಳು ಮತ್ತು ಪ್ರಾಧ್ಯಾಪಕರುಗಳ ಬೆಂಬಲದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳ ಮೂಲಕ ವಿದ್ಯಾಲಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಕನಸಿದೆ ಎಂದರು.
ಇಲ್ಲಿಯವರೆಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ವೈ. ವಿಜಯಕುಮಾರ್ ಸೇವೆಯಿಂದ ನಿವೃತ್ತಿ ಹೊಂದಿದ್ದು, ಅವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಡಾ ವೈ ವಿಜಯ್ ಕುಮಾರ್ 2019ರ ಆಗಸ್ಟ್ ತಿಂಗಳಿನಲ್ಲಿ ಪ್ರಾಂಶುಪಾಲರಾಗಿ ತಮ್ಮ ಸೇವೆಯನ್ನು ಪ್ರಾರಂಭಿಸಿದ್ದರು.