ಡಾ.ವೆಂಕಟೇಶ್ ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ ವೆಂಕಟೇಶ್ ಎಂ ವಿ ಅವರು ಇಂದು ದಾವಣಗೆರೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಿರ್ಗಮಿತ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ನೂತನ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು, ಡಾ.ವೆಂಕಟೇಶ ಎಂ.ವಿ. ಅವರು ಈ ಹಿಂದೆ ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿದ್ದರು. ವೆಂಕಟೇಶ್ 2009 ನೇ ಬ್ಯಾಚಿನ ಐಎಎಸ್ ಅಧಿಕಾರಿ ಆಗಿದ್ದಾರೆ. ವೆಂಕಟೇಶ್ ಹಾವೇರಿ ಹಾಗೂ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!