ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು
ಅಸ್ಸಾಂ : ಅಸ್ಸಾಂನ ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ.
ಅಸ್ಸಾಂಗೆ ಮೂರು ದಿನಗಳ ಪ್ರವಾಸದ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರು ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಎರಡನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
ಮುರ್ಮು ಅವರು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಮುರ್ಮು ಅವರು ಏ.6ರಂದು ಅಸ್ಸಾಂಗೆ ಬಂದಿದ್ದಾರೆ. ಶುಕ್ರವಾರ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದರು.