12-14 ವರ್ಷದ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ
ದಾವಣಗೆರೆ : ಬುಧವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲೆಯ 12 ರಿಂದ 14 ವರ್ಷದ ಎಲ್ಲಾ ಮಕ್ಕಳಿಗೆ ಕಾರ್ಬಿ ವ್ಯಾಕ್ಸ್ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಹೆಚ್ಓ ಡಾ.ನಾಗರಾಜ್, ಡಿಎಸ್ ಡಾ.ಷಣ್ಮುಖಪ್ಪ, ಆರ್ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಆರ್ಎಂಓ ಡಾ.ಮಂಜುನಾಥ್ ಪಾಟೀಲ್, ಟಿಹೆಚ್ಓ ಡಾ. ಎಲ್.ಡಿ. ವೆಂಕಟೇಶ್, ಡಾ.ಸುರೇಶ್ ಗುಂಡಪಲ್ಲಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಎನ್.ಬಾರ್ಕಿ ಹಾಗೂ ಜಿಲ್ಲಾಸ್ಪತ್ರೆ ವೈದ್ಯರು, ಜಿಲ್ಲಾ ಮತ್ತು ತಾಲ್ಲೂಕು ಆಶಾ ಮೆಂಟರ್, ಆಶಾ ಕಾರ್ಯಕರ್ತರು, ಲಸಿಕಾಕರಣ ವಿಭಾಗದ ಅಧಿಕಾರಿಗಳು ಹಾಜರಿದ್ದರು.