drought; ಭೀಕರ ಬರ; ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಮುಖಂಡ ಖಂಡನೆ

ದಾವಣಗೆರೆ, ನ.04: ಭೀಕರ ಬರದ (drought) ಪರಿಣಾಮಗಳನ್ನು ಅಧ್ಯಯನ ಮಾಡಿ 33 ಸಾವಿರ ಕೋಟಿ ರೂ.ಗಳ ಬೆಳೆ ಹಾನಿ ಎಂದು ಅಂದಾಜಿಸಲಾಗಿತ್ತು. ಆದರೆ ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇವಲ 324 ಕೋಟಿ ರೂಗಳನ್ನು ಬಿಡುಗಡೆ ಮಾಡಿರುವುದು ಬರದ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತೆ ಆಗಿದೆ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ, ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯದಲ್ಲಿ 6319528 ರೈತರಿದ್ದು, ಇವರಲ್ಲಿ 5 ಎಕರೆ ಗಿಂತ ಕಡಿಮೆ ಕೃಷಿ ಜಮೀನು ಹೊಂದಿರುವ ಸಣ್ಣ ರೈತರು 5273736 ಇದ್ದಾರೆ. ರಾಜ್ಯದ ಬರ ಅಧ್ಯಯನ ತಂಡ ಅಂದಾಜಿನ ಮೊತ್ತಕ್ಕೆ ಹೋಲಿಕೆ ಮಾಡಿದರೆ ಶೇಕಡ 1 ಕ್ಕಿಂತ ಕಡಿಮೆ ಮೊತ್ತದ ಪರಿಹಾರ ಬಿಡುಗಡೆ ಮಾಡಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ.

ದಾವಣಗೆರೆ ಜಿಲ್ಲೆಯಲ್ಲಿ 183946 ರೈತರಿದ್ದು, ಇವರಲ್ಲಿ 5 ಎಕರೆ ಗಿಂತ ಕಡಿಮೆ ಕೃಷಿ ಜಮೀನು ಹೊಂದಿರುವ ಸಣ್ಣ ರೈತರು 153682 ಇದ್ದಾರೆ. ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವವರು ಸಂಖ್ಯೆ 230568 ಇದೆ. ಸಣ್ಣ ರೈತರು ಮತ್ತು ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ಸೇರಿ 384250 ಜನರಿದ್ದಾರೆ. ದಾವಣಗೆರೆ ಜಿಲ್ಲೆಗೆ ಕೇವಲ 9 ಕೋಟಿ ರೂಗಳ ಬರ ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ದುಡ್ಡು ತಲಾ 234 ರೂಪಾಯಿ 22 ಪೈಸೆಯಾಗುತ್ತದೆ.

Valmiki Jayanti; ವಾಲ್ಮೀಕಿ ಜಯಂತಿಯನ್ನು ಏಕೆ ಮತ್ತು ಹೇಗೆ ಆಚರಿಸಬೇಕು?

ರಾಜ್ಯದ ಕಾಂಗ್ರೆಸ್ ಸರ್ಕಾರ ಬರದಿಂದ ತತ್ತರಿಸಿರುವ ರೈತರ ಹಿತ ಕಾಪಾಡುವಲ್ಲಿ ಕಾಳಜಿ ಇಲ್ಲ. ಕೇವಲ ಬೂಟಾಟಿಕೆಗಾಗಿ ಜಿಲ್ಲೆಗೆ 9 ಕೋಟಿ ಬಿಡುಗಡೆ ಮಾಡಿದೆ ಎಂದು ಬಿ ಎಂ ಸತೀಶ್ ಆರೋಪಿಸಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ತೀವ್ರ ಬರದ ಬವಣೆಯಿಂದ ಬಳಲಿರುವ ರೈತರಿಗೆ, ಕೃಷಿ ಕೂಲಿಕಾರರಿಗೆ ಹಿಂಗಾರು ಹಂಗಾಮಿನಲ್ಲಿಯೂ ಬರದ ಛಾಯೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿದೆ. ಇಂತಹ ಕರಾಳ ದಿನಗಳಲ್ಲಿ ಮಕ್ಕಳ ಶಿಕ್ಷಣ ಅರ್ಧಕ್ಕೆ ನಿಲ್ಲದಂತೆ ನೋಡಿಕೊಳ್ಳುವುದು, ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಜನ ಗುಳೆ ಹೋಗದಂತೆ ನಿಯಂತ್ರಿಸುವುದು, ಆಹಾರ ಧಾನ್ಯಗಳ ಪೂರೈಕೆ ಮತ್ತು ಆರೋಗ್ಯ ಸಮಸ್ಯೆ ಬಿಗಾಡಯಿಸದಂತೆ ಅಗತ್ಯ ಔಷಧಿಗಳ ಪೂರೈಕೆ ಮಾಡುವುದು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಬಿ ಎಂ ಸತೀಶ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!