Drugs:ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು – ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

WhatsApp Image 2025-05-22 at 5.20.13 PM
ದಾವಣಗೆರೆ (Drugs): ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

ಇತ್ತೀಚಿನ ಸುದ್ದಿಗಳು

error: Content is protected !!