ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನ, ಇವರ ವಿರುದ್ಧವೇ ಕ್ರಮ ಖಚಿತ – ಸಿಎಂ
ಬೆಂಗಳೂರು: ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ*
*ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ*
*ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ*
*ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ*
*ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧವೇ ಕ್ರಮ ಖಚಿತ*
*ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ*
*ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ*
*NCC, NGO ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ*
*ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ*
*ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ*
*ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತಗತಿರುವುದನ್ನು ತಡೆಯಲು ಕ್ರಮ*
*ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್*
*ಪೊಲೀಸರಿಗೆ free hand ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತಗೊತೀವಿ*
*ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ*
*ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ*
*ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ*
*ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ*
*ಬೆಂಗಳೂರು EAST ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ ಹಾಕಲು ನಿರ್ಣಯ ಮಾಡಿದ್ದೇವೆ*
*ಒಡಿಶ್ಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ supply ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ*
*ಮಾದಕ ದ್ರವ್ಯ ಹಾವಳಿ ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು*
• ಇಂದು ಮಾದಕ ವಸ್ತು ನಿಯಂತ್ರಣ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
• ಸರ್ಕಾರವು ಮಾದಕ ವಸ್ತುಗಳ ಹಾವಳಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಇದರ ವಿರುದ್ಧದ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತಂದು ಕಾನೂನು ಬಲ ಪಡಿಸುವ ಕುರಿತು ಪರಿಶೀಲಿಸುವಂತೆ ಸೂಚಿಸಲಾಗಿದೆ. ಮಾದಕ ವಸ್ತುಗಳ ಪೆಡ್ಲರ್‌ಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ಸೇರಿದಂತೆ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲು ನಿರ್ಧಾರ. ಕಾನೂನು ಕಾರ್ಯದರ್ಶಿ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ಈ ಕುರಿತು ಅಂತಿಮ ರೂಪುರೇಷೆ ನಿಗದಿ ಪಡಿಸುವಂತೆ ಸೂಚಿಸಿದರು.
• ಮಾದಕ ವಸ್ತುಗಳ ಹಾವಳಿ ಸಂಪೂರ್ಣ ಮಟ್ಟ ಹಾಕಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು. ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ನಿಯಂತ್ರಿಸುವ ಕಾರ್ಯದ ಸಂಪೂರ್ಣ ಮೇಲುಸ್ತುವಾರಿಯನ್ನು ಟಾಸ್ಕ್‌ಫೋರ್ಸ್ ನಿರ್ವಹಿಸಲಿದೆ.
• ಪೊಲೀಸ್ ಇಲಾಖೆಗೆ ಮಾದಕ ವಸ್ತುಗಳ ಮಾರಾಟ, ಸರಬರಾಜು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿರುವ ಸೂಕ್ಷ್ಮ ಪೊಲೀಸ್ ಠಾಣಾ ವ್ಯಾಪ್ತಿಗಳನ್ನು ಗುರುತಿಸಿ, ಅಂತಹ ಕಡೆ ಮಾದಕ ವಸ್ತುಗಳ ನಿಯಂಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಆಯಾ ಠಾಣೆಯ ಇನ್ಸ್‌ಪೆಕ್ಟರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.
• ಶಾಲೆ, ಕಾಲೇಜುಗಳಲ್ಲಿ, ವಸತಿ ಶಾಲೆಗಳಲ್ಲಿ ಈ ಕುರಿತು ಹೆಚ್ಚಿನ ನಿಗಾ ವಹಿಸಲು ಸ್ಟೂಡೆಂಟ್ ಪೊಲೀಸಿಂಗ್ ವ್ಯವಸ್ಥೆ ಜಾರಿಗೆ ತರಲಾಗುವುದು. ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳನ್ನು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
• ಔಷಧಿ ಮಳಿಗೆಗಳಲ್ಲಿ ಅನಧಿಕೃತವಾಗಿ ಸಿಂಥೆಟಿಕ್ ಡ್ರಗ್ಸ್, ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಯಿತು. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದವರ ಪರವಾನಗಿಯನ್ನು ರದ್ದುಪಡಿಸಲು ಸೂಚಿಸಲಾಯಿತು. ಔಷಧಿ ಮಳಿಗೆಗಳ ಮೇಲೆ ನಿರಂತರ ನಿಗಾ ಇರಿಸಿ, ಆಗಿಂದಾಗ್ಗೆ ಪರಿಶೀಲನೆ ನಡೆಸುವಂತೆ ಡ್ರಗ್ಸ್ ಕಂಟ್ರೋಲ್ ಇಲಾಖೆಗೆ ಸೂಚನೆ ನೀಡಲಾಯಿತು.
• ಮಾದಕ ದ್ರವ್ಯ ಹಾವಳಿ ತಡೆಗೆ ಇರುವ ಜಿಲ್ಲಾ ಸಮಿತಿಗಳು ಹೆಚ್ಚು ಸಕ್ರಿಯವಾಗಿ, ಜಿಲ್ಲೆಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
• ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ತಮ್ಮ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲುಗಳಲ್ಲಿ ನಿಯಮಿತವಾಗಿ ಜಾಗೃತಿ ಮೂಡಿಸಬೇಕು.
• ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಹಾಗೂ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
• ಪ್ರತಿಯೊಂದು ಇಲಾಖೆಗೆ/ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನಿಗದಿಪಡಿಸಿ, ಕಟ್ಟುನಿಟ್ಟಿನಿಂದ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಲಾಯಿತು.
• ರಾಜ್ಯದಲ್ಲಿ ಮಾದಕವಸ್ತು ಹಾವಳಿಯನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯಾರ್ಥಿ ಯುವ ಸಮೂಹ ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಡೆಯಲು ಎಲ್ಲಾ ಇಲಾಖೆಗಳು ಸಂಘಟಿತ ಪ್ರಯತ್ನ ಮಾಡಬೇಕು.