ದಾವಣಗೆರೆ, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯ ಪಿಎಸ್‌ಐಗಳ ವರ್ಗಾವರ್ಗಿ ಯಾರು.? ಎಲ್ಲಿಗೆ.? ಇಲ್ಲಿದೆ ಮಾಹಿತಿ

ದಾವಣಗೆರೆ: ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್. ಶೈಲಜಾ, ಬಡಾವಣೆ ಠಾಣೆಯ ಪಿಎಸ್‌ಐ ಅನ್ನಪೂರ್ಣಮ್ಮ, ವಿದ್ಯಾನಗರ ಠಾಣೆಯ ಪಿಎಸ್‌ಐ ವಿಜಯ, ಹದಡಿ ಠಾಣೆಯ ಪಿಎಸ್‌ಐ ಶಕುಂತಲಾ, ಹರಿಹರ ಗ್ರಾಮಾಂತರ ಠಾಣೆಯ ಪಿ ಎಸ್ ಐ ಅರವಿಂದ್, ಸಿ ಇ ಎನ್ ಠಾಣೆಯ ರೇಣುಕಾ, ಸಂತೆಬೆನ್ನೂರು ಠಾಣೆಯ ರೂಪಾ ತೆಂಬದ್, ಬಸವಾಪಟ್ಟಣ ಠಾಣೆಯ ಭಾರತಿ ಸೇರಿದಂತೆ ಪೂರ್ವ ವಲಯದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 128ಕ್ಕೂ ಹೆಚ್ಚು ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗೊಳಪಟ್ಟು ಹಾಗೂ ಪೊಲೀಸ್ ಪ್ರಧಾನ ಕಛೇರಿಯ ಪತ್ರದಲ್ಲಿನ ನಿರ್ದೇಶನಗಳನ್ವಯ ವರ್ಗಾವಣೆ ಪ್ರಕ್ರಿಯೆಗಳನ್ನು ಕುರಿತು ದಿನಾಂಕ:28/01/2024 ರಂದು ನಡೆಸಲಾದ ಪೊಲೀಸ್ ಸಿಬ್ಬಂದಿ ಮಂಡಳಿಯ ತೀರ್ಮಾನದಂತೆ ವರ್ಗಾವಣೆ ನಡೆಸಲಾಗಿದೆ.

ವರ್ಗಾವಣೆ ಲೀಸ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ: Eastern range psi transfer list

ಪೂರ್ವ ವಲಯದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ರವರುಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಅಂದಹಾಗೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!