ಶಿಕ್ಷಣಕ್ಕೆ ಹೆಚ್ಚಿನ ಒತ್ತು, ರಾಜ್ಯದ ಅಭಿವೃದ್ಧಿಗೆ ಪೂರಕ: ಮೊಹಮ್ಮದ್ ಜಿಕ್ರಿಯಾ

ಶಿಕ್ಷಣ

ದಾವಣಗೆರೆ: ರಾಜ್ಯ ಬಜೆಟ್ ಅಭಿವೃದ್ಧಿ ಪೂರಕ ಆಗಿದ್ದು ಸ್ವಾಗತಾರ್ಹ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಒಳ್ಳೆಯ ಕಾರ್ಯ. ಶಾಲೆಗಳ ಅಭಿವೃದ್ಧಿಗೆ ಕ್ರಮ, ಶಾಲೆಗಳ ಮೂಲ ಸೌಕರ್ಯಕ್ಕೆ ಅನುದಾನ, ಸರ್ಕಾರಿ ಕಾಲೇಜುಗಳ ಉನ್ನತೀಕರಣಕ್ಕೆ ಅನುದಾನ ನೀಡಿದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಬಾಲ್ ಮಂಚ್ ದಾವಣಗೆರೆ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ತಿಳಿಸಿದ್ದಾರೆ.

ಶಾಲಾ, ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿದ್ದಾರೆ. ಈ ಬಾರಿ ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಇದು ಸ್ವಾಗತಾರ್ಹ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-
ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ, ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟ‌ರ್ ಪ್ರಯೋಗಾಲಯ, ಇಂಟರ್‌ನೆಟ್ ಸೌಲಭ್ಯ ಒದಗಿಸಿರುವು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಎ. ಪಿ. ಎಂ. ಸಿ. ಕಾಯ್ದೆ ತಿದ್ದುಪಡಿಯಿಂದಾಗಿ ಕೃಷಿಗೆ ಮತ್ತೂ ರೈತರಿಗೆ ಪೂರಕವಾದ ಬಜೆಟ್ ಆಗಿದೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಉತ್ತಮವಾಗಿದೆ. ಬಜೆಟ್ ಕವರ್ ಪೇಜ್ ಗೆ ಸಂವಿಧಾದ ಪ್ರತಿ ಮುದ್ರಣ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ಮೊಹಮ್ಮದ್ ಜಿಕ್ರಿಯಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!