education; ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ: ಶಾಸಕ ಬಸವರಾಜು ವಿ ಶಿವಗಂಗಾ

ಚನ್ನಗಿರಿ, ಆ.19: ನಮ್ಮ ಸರ್ಕಾರ ಅಭಿವೃದ್ಧಿ ಜೊತೆಗೆ ಶಿಕ್ಷಣಕ್ಕೂ (education) ಹೆಚ್ಚು ಮಹತ್ವ ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ ಎಂದು ಶಾಸಕ ಬಸವರಾಜು ವಿ ಶಿವಗಂಗಾ (Basavaraju V Shivaganga) ತಿಳಿಸಿದರು.

ತಾಲ್ಲೂಕಿನ ಹಿರೇಕೋಗಲೂರು ಗ್ರಾಮದ ಶ್ರೀ ತರಳಬಾಳು ಜಗದ್ಗುರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ( ಪ್ರೌಢ ಶಾಲಾ ವಿಭಾಗ) ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ತಾಲ್ಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳಿಗೆ ನೂತನ ಕೊಠಡಿಗಳನ್ನ ಉದ್ಘಾಟನೆ ಮಾಡಲಾಗಿದೆ. ಇನ್ನೂ ಕೆಲ ಶಾಲೆಗಳಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಜೊತೆಗೆ ಸೌಕರ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದೆಂದರು. ನಾವೆಲ್ಲಾ ಸರ್ಕಾರಿ ಶಾಲೆಗಳಲ್ಲೇ ಓದಿದ್ದು ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದಾರೆ, ಮಕ್ಕಳು ಮೊದಲಿನಿಂದಲೇ ಚನ್ನಾಗಿ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಗಳಿಗಳಿಗೆ ಹಾಗೂ ಶಾಲೆ ಗ್ರಾಮಕ್ಕೆ ಒಳ್ಳೆ ಹೆಸರನ್ನು ತರಬೇಕೆಂದರು.

Outsource employee; ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಪ್ರಸ್ತಾವನೆಗೆ ಸಚಿವರ ಸೂಚನೆ

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಸುಮಾ ಶಿವಕುಮಾರ್, ಉಪಾಧ್ಯಕ್ಷರಾದ ಸುಮಾ ಕೃಷ್ಣ ಮೂರ್ತಿ, ಎಸ್‍ಡಿಎಂಸಿ ಅಧ್ಯಕ್ಷರಾದ ಸುರೇಶ್ ಹಾಗೂ ಪ್ರಾಚಾರ್ಯರಾದ ಹೇಮಾವತಿ ಮುಖ್ಯಶಿಕ್ಷಕರಾದ ಪ್ರಭಾಕರ್, ಗ್ರಾಮದ ಮುಖಂಡರಾದ ಬಿಜಿ ಸ್ವಾಮಿ, ಶರತ್, ಕೆಪಿ ವೆಂಕಟೇಶ್ ಸೇರಿಂದತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!