ಉಪ್ಪಾರ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ;  ನಲ್ಕುಂದ ಹಾಲೇಶ ಮನವಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ, ಓ.ಬಿ.ಸಿ.ವಿಭಾಗದ ಉಪಾಧ್ಯಕ್ಷರಾಗಿರುವ ನಲ್ಕುಂದದ ಹಾಲೇಶ್ ಇವರು ಉಪ್ಪಾರ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯಶ್ರೀ ಸಿದ್ಧರಾಮಯ್ಯ ನವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.
ನಲ್ಕುಂದ ಹಾಲೇಶ್‌ರವರು ಕಳೆದ ೩೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಯೂತ್ ಕಾಂಗ್ರೆಸ್‌ನಿಂದ ಓಬಿಸಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಎಲ್ಲಾ ಜನಾಂಗದವರ ಪ್ರೀತಿ ವಿಶ್ವಾಸದೊಂದಿಗೆ ಅವರುಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಹಾಗೂ ವಿಧಾನಸಭೆ, ಲೋಕಸಭೆ, ಮಹಾನಗರಪಾಲಿಕೆ ಹಾಗೂ ಇನ್ನಿತರೆ ಸ್ಥಳೀಯ ಎಲ್ಲಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡಿ, ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿರುತ್ತಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪುಟರಂಗ ಶೆಟ್ಟಿಯವರು, ಹಾಗೂ ಜಿಲ್ಲೆಯ ಶಾಸಕರುಗಳಾದ ಹೊನ್ನಾಳಿಯ ಡಿ.ಜೆ.ಶಾಂತನಗೌಡ, ಮಾಯಕೊಂಡದ ಕೆ.ಬಸವಂತಪ್ಪ, ಚನ್ನಗಿರಿಯ ಬಸವರಾಜ ಶಿವಗಂಗಾ, ಜಗಳೂರಿನ ದೇವೇಂದ್ರಪ್ಪ, ಮಾಜಿ ಶಾಸಕರಾದ ರಾಮಪ್ಪ ಮತ್ತಿತರರು ಹಾಲೇಶ್‌ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಶಿಫಾರಸ್ಸು ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!