employees; ಆ.28 ರಂದು ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮ
ದಾವಣಗೆರೆ, ಆ. 21: ಸಾಮಾಜಿಕ ಭದ್ರತೆಗಾಗಿ ಉದ್ಯೋಗದಾತರು, ಉದ್ಯೋಗಿಗಳು (employees) ಹಾಗೂ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಹರಿಸುವ ಸಲುವಾಗಿ ಆ.28 ರಂದು ಹರಪನಹಳ್ಳಿಯ ಎಸ್.ಸಿ.ಎಸ್ ಕಾಲೇಜ್ ಆಫ್ ಫಾರ್ಮಸಿ, ಗಂಗೋತ್ರಿ ಕ್ಯಾಂಪಸ್, ಐ.ಬಿ ಸರ್ಕಲ್ ಹತ್ತಿರ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
minority; ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಉದ್ಯೋಗದಾತರು ಹಾಗೂ ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4ರ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ ತಿಳಿಸಿದ್ದಾರೆ.