ಎನ್ ಐಎ ತಂಡದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ
![Engineering student arrested by NIA team](https://garudavoice.com/wp-content/uploads/2023/01/5-1-23-15.jpg)
ಉಳ್ಳಾಲ: ಏಳು ಮಂದಿ ಎನ್ ಐಎ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ನಿರಂತರ ಸಂಪರ್ಕ ಹೊಂದಿದ್ದ ಕೈರಂಗಳ ಗ್ರಾಮದ ನಡುವಿನ ಖಾಸಗಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ಉಡುಪಿ ಮೂಲದ ವಿದ್ಯಾರ್ಥಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಈತ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತನ ಜೊತೆಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದ ಎಂಬ ವಿಚಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.