David Willey; ಇಂಗ್ಲೆಂಡ್ ನ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಣೆ
ಈ ಬಾರಿಯ ವಿಶ್ವಕಪ್ ಪಂದ್ಯಾಟದಲ್ಲಿ ಇಂಗ್ಲೆಂಡ್ ಸತತ ಸೋಲಿನೊಂದಿಗೆ ಕೊನೆಯ ಸ್ಥಾನದಲ್ಲಿದ್ದು, ಇದರ ನಡುವೆ ತಂಡದ ಪ್ರಮುಖ ಆಟಗಾರ ಆಲ್‌ರೌಂಡ್‌ಗಳಲ್ಲಿ ಒಬ್ಬರಾಗಿರುವ ಡೇವಿಡ್ ವಿಲ್ಲಿ (David Willey) ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇವರ ವಿದಾಯದ ಘೋಷಣೆ ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.
ಇಂಗ್ಲೆಂಡ್ ತಂಡದ ಪ್ರಮುಖ ಆಲ್ರೌಂಡರ್ಗಳಲ್ಲಿ ಒಬ್ಬರಾಗಿರುವ ವಿಲ್ಲಿ, ಈ ಬಾರಿಯ ವಿಶ್ವಕಪ್ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್ರೌಂಡರ್ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
karnataka highcourt; ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ
ಡೇವಿಡ್ ಹೇಳಿಕೆ ಹೀಗಿದೆ: ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್‌ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.