ದಾವಣಗೆರೆ ಸಂತ ಪೌಲರ ಶಾಲೆಯಲ್ಲಿ ಪರಿಸರ ದಿನಾಚರಣೆ
ದಾವಣಗೆರೆ: ನಗರದ ಸಂತ ಪೌಲರ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಮುಖ್ಯ ರಸ್ತೆಗಳಲ್ಲಿ ಜಾತಾ ನಡೆಸಿ ಜನರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿದರು.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಇರುವುದೊಂದೆ ಭೂಮಿ’ ಎಂಬ ಶೀರ್ಷಿಕೆಯಡಿ ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ನಂತರ ನಡೆದ ಪರಿಸರ ಜಾಗೃತಿ ಜಾತಾದಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.
www.garuda voice.com 9740365719