ಬೆಂಗಳೂರು: ರಾಜ್ಯಕ್ಕೆ ಮೂರು ದಿನಗಳ ಭೇಟಿಗೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ಬೊಮ್ಮಾಯಿ ಸರ್ಕಾರದ ಪರವಾಗಿ ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿದರು.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.