ಎಐಸಿಸಿ ಮುಖಂಡರ ಜೊತೆ ಎಸ್ಸೆಸ್ ಮಾತುಕತೆ

ಎಐಸಿಸಿ ಮುಖಂಡರ
ದಾವಣಗೆರೆ: 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೇಮಕಗೊಂಡಿರುವ ಎಐಸಿಸಿ ಕಮಿಟಿ ಚೇರ್ಮನ್ ಶ್ರೀ ಮೋಹನ್ ಪ್ರಕಾಶ್ ಅವರು ಇಂದು ಶಾಸಕರು ಹಿರಿಯ ಕಾಂಗ್ರೆಸ್ ಮುಖಂಡರಾದ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮಾತುಕತೆ ವೇಳೆ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ಕಮಿಟಿಯ ಸದಸ್ಯರು ಶಾಮನೂರು ಶಿವಶಂಕರಪ್ಪನವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮತ್ತಿತರರಿದ್ದರು.