ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆ ಸೋರಿಕೆ

ದಾವಣಗೆರೆ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆಯನ್ನು ಕಿಡಿಗೇಡಿಗಳು ಸೋರಿಕೆ ಮಾಡಿದ್ದಾರೆ.
ಚನ್ನಗಿರಿ ತಾಲ್ಲೂಕು ಕಾರಿಗನೂರು ಸರ್ಕಾರಿ ಪ್ರೌಢಶಾಲೆಯಿಂದ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ.
ಪ್ರಶ್ನೆ ಪತ್ರಿಕೆಯನ್ನು ಹೊರತಂದು ಕಿಡಿಗೇಡಿಗಳು ಉತ್ತರ ಬರೆದುಕೊಡುತ್ತಿದ್ದಾರೆ. ಇದೀಗ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಪರಿಕ್ಷಾ ಕೇಂದ್ರದ ಸಿಬ್ಬಂದಿಯೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ಇದೆ.
ಮೊನ್ನೆ ಇದೇ ರೀತಿ ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಸಹ ವೈರಲ್ ಆಗಿತ್ತು.