electricity; ಪ್ರತಿದಿನ ಏಳು ತಾಸು ವಿದ್ಯುತ್‌: ಸಿದ್ದರಾಮಯ್ಯ

ಬೆಂಗಳೂರು, ನ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಂಧನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ (electricity) ನೀಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಡಿಡಿ ಪ್ರತಿಮಾ ಹತ್ಯೆ ಪ್ರಕರಣ: ತನಿಖೆ ಬಳಿಕ ಸತ್ಯ ಬಹಿರಂಗ: ಎಸ್‌ ಎಸ್‌ ಮಲ್ಲಿಕಾರ್ಜುನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಂತಿವೆ.

೧. 2022ನೇ ಇಸವಿಗೆ ಹೋಲಿಸಿದರೆ 2023ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43ರಷ್ಟು ಹೆಚ್ಚಿದೆ

೨. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45ರಷ್ಟು ಹೆಚ್ಚಿದೆ

೩. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ

೪. ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ

೫. ಸೆಕ್ಷನ್ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ

೬. ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ

drought; ಭೀಕರ ಬರ; ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಮುಖಂಡ ಖಂಡನೆ

೭. ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ

೮. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು

೯. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು.

೧೦. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ (Solarisation of EIP Feeders). ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *

error: Content is protected !!