ಪರಿಸರ ಉಳಿವಿಗಾಗಿ ಪ್ರತಿಯೊಬ್ಬರು ಕೈ ಜೋಡಿಸಿ : ಐಪಿಎಸ್ ಅಧಿಕಾರಿ ಎಚ್.ಎನ್ ಮಿಥುನ್

ಬಸವಾಪಟ್ಟಣ : ಪ್ರತಿ ದಿನ ವಾಯು ಮಾಲಿನ್ಯ ಶಬ್ದ ಮಾಲಿನ್ಯ, ಜಲ ಮಾಲಿನ್ಯ ಹೆಚ್ಚಾಗುತ್ತಿದ್ದು, ಇದರಿಂದ ಪರಿಸರ ಮತ್ತು ಜನರ ಆರೋಗ್ಯ ಹದಗೆಡುತ್ತದೆ. ಇದರ ಮುಕ್ತಿಗಾಗಿ ಪರಿಸರ ರಕ್ಷಣೆ ಮಾಡುವುದರೊಂದಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಬಸವಾಪಟ್ಟಣ ಪೊಲೀಸ್ ಐಪಿಎಸ್ ಅಧಿಕಾರಿ ಎಚ್.ಎನ್ ಮಿಥುನ್ ಹೇಳಿದರು.

ಬಸವಾಪಟ್ಟಣದ ಜನತಾ ಪ್ರೌಢಶಾಲೆಯಲ್ಲಿ ಮಂಗಳವಾರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದೊಂದಿಗೆ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರ ಸಂರಕ್ಷಣೆಯು ಕೇವಲ ವಿಶ್ವ ಪರಿಸರ ದಿನಾಚರಣೆ ದಿನ ಮಾತ್ರ ಆಚರಣೆಯಾಗದೇ, ಪ್ರತಿ ದಿನ ಇದರ ರಕ್ಷಣೆಯ ಕಾಳಜಿ ನಮ್ಮದಾಗಬೇಕು. ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ವಿದ್ಯುತ್ ಮತ್ತು ನೀರನ್ನು ಮಿತವಾಗಿ ಬಳಸುವುದನ್ನು ಅರಿಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!