ನಾಳೆ ದಾವಣಗೆರೆಗೆ ಆಗಮಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

 

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜು.2 ರಂದು ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಅಂದು ಹರಿಹರದ ಸಿದ್ದೇಶ್ವರ ಪ್ಯಾಲೇಸ್ ನಲ್ಲಿ ನಡೆಯುವ ಕಾಂಗ್ರೆಸ್ ನ ಹರಿಹರ ಶಾಸಕ ಎಸ್. ರಾಮಪ್ಪ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಮಧ್ಯಾಹ್ನ 1:30 ಕ್ಕೆ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಜಕ್ಕೂರು ಹೆಲಿಪ್ಯಾಡ್ ಮೂಲಕ ಎಂ.ಬಿ.ಎ ಕಾಲೇಜು ಹೆಲಿಪ್ಯಾಡ್ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ 12:45 ಕ್ಕೆ ಹರಿಹರಕ್ಕೆ ತೆರಳಲಿದ್ದಾರೆ. ನಂತರ ವಿವಾಹ ಕಾರ್ಯಕ್ರಮದ ನಂತರ 2 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!