ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ, ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ (ವಸತಿ) ನಿರ್ಮಾಣ ಯೋಜನೆ ಕಲ್ಪಿಸುವ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ. 31 ರವರೆಗೆ ವಿಸ್ತರಿಸಿದೆ. ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ, ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ (ವಸತಿ) ನಿರ್ಮಾಣ ಯೋಜನೆ ಕಲ್ಪಿಸುವ ಯೋಜನೆಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ. 15 ಕೊನೆಯ ದಿನವಾಗಿತ್ತು. ಇದೀಗ ಸಮುದಾಯದ ಅನೇಕ ಮುಖಂಡರುಗಳ ಕೋರಿಕೆಯ ಮೇರೆಗೆ ಆಫ್ಲೈನ್ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08192 233309 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.