eye donation; ಸೆ.7ರಂದು ನೇತ್ರದಾನ ಪ್ರಾಕ್ಷಿಕ ಆಚರಣೆ
ದಾವಣಗೆರೆ, ಸೆ.06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ಹಾಗೂ ದೃಷ್ಠಿದೋಷ ನಿಯಂತ್ರಣ ಕಾರ್ಯಕ್ರಮ ವತಿಯಿಂದ ಸೆ.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ನಿಜಲಿಂಗಪ್ಪ ಬಡಾವಣೆಯ ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ 38ನೇ ರಾಷ್ಟ್ರೀಯ ನೇತ್ರದಾನ (eye donation) ಪಾಕ್ಷಿಕ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಕಾರ್ಯಕ್ರಮ ಉದ್ಘಾಟಿಸುವರು. ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಎಂ.ಡಿ ಅಣ್ಣಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
marathon; ಯುವಜನೋತ್ಸವದ ಅಂಗವಾಗಿ ಮ್ಯಾರಥಾನ್, ಚಾಲನೆ
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್, ಜಿಲ್ಲಾ ಕೃಷ್ಠರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಅಧಿಕಾರಿ ಡಾ. ಮಂಜುನಾಥ್ ಎಲ್. ಪಾಟೀಲ್, ಹಿರಿಯ ನ್ಯಾಯವಾದಿ ಮತ್ತು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್ ಅರುಣ್‍ಕುಮಾರ್, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪೆÇ್ರ. ಕಾಡಜ್ಜಿ ಶಿವಪ್ಪ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಐ.ಕ್ಯೂ.ಎ.ಸಿ ಸಂಚಾಲಕ, ಅಂಜಿನಪ್ಪ.ಡಿ ಹಾಗೂ ನಿವೃತ್ತ ಹಿರಿಯ ನೇತ್ರ ತಜ್ಞ ಡಾ. ಶ್ರೀಮಂತ ಸಿದ್ದಪ್ಪ ಕಳಕೋರ ಉಪಸ್ಥಿತರಿರುವರು.