ಆತ್ಮ ವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ- ಪ್ರೊ. ವಿ. ಬಾಬು

ದಾವಣಗೆರೆ :ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರು ಮಾಡಿಕೊಳ್ಳಬೇಕಾದರೆ ಆತ್ಮವಿಶ್ವಾಸದಿಂದ ಅಧ್ಯಯನ ಮಾಡಿ ಮತ್ತು ಹಿಂದಿನ ಪ್ರಶ್ನೆ ಪತ್ರಿಕೆಗಳ ಬಿಡಿಸುವಿಕೆ ಮುಖ್ಯ. ಹಾಗೂ ಪರಿಕ್ಷಾ ಪೂರ್ವದಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಪಠ್ಯಕ್ರಮದ ಕುರಿತು ನಡೆಯುವ ಕಾರ್ಯಗಾರದಲ್ಲಿ ಭಾಗವಹಿಸಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಯನ್ನು ಎದುರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ವೆಂಕಟೇಶ್ ಬಾಬು ಹೇಳಿದರು.
ಅವರು ಇoದು ನಗರದ ನಿಜಲಿಂಗಪ್ಪ ಬಡಾವಣೆಯ ಜೈನ್ ಟ್ರಿನಿಟಿ ಪದವಿಪೂರ್ವ ಕಾಲೇಜು ಹಾಗೂ ಜೈನ್ ಬುಸಿನೆಸ್ ಸ್ಕೂಲ್ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಲರ್ನ್ ಫ್ರಮ್ ಮಾಸ್ಟರ್ ಪರೀಕ್ಷಾ ಪೂರ್ವ ಸಿದ್ಧತೆ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತರಹದ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಕುರಿತು ಸಂಪೂರ್ಣ ಮಾಹಿತಿ ದೊರೆಯುತ್ತದೆ ಹಾಗೂ ಪರೀಕ್ಷೆಯಲ್ಲಿ ಬರುವ ಕಠಿಣ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು. ಹೆಚ್ಚು ಅಂಕಗಳನ್ನು ಗಳಿಸುವುದು ಹೇಗೆ ಮತ್ತು ಪಠ್ಯಕ್ರಮವನ್ನು ಹೇಗೆ ಶಿಸ್ತುಬದ್ಧವಾಗಿ ಯೋಚನೆ ಸಿದ್ಧಪಡಿಸಿಕೊಂಡು ಓದಬಹುದು ಎಂಬ ವಿಚಾರಗಳ ಕುರಿತು ಸಂಪೂರ್ಣ ಮಾಹಿತಿಯು ದೊರೆಯುತ್ತದೆ. ಇದರಿಂದ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುವುದರ ಜೊತೆಗೆ ವಿದ್ಯಾರ್ಥಿಗಳು ಮುಂದಿನ ಭವಿಷ್ಯಕ್ಕೆ ಕಾಲೇಜುಗಳು ಮತ್ತು ಅವರ ಗುರಿಗಳನ್ನು ನಿರ್ಧರಿಸಲು ಸಹಾಯವಾಗುತ್ತದೆ. ಎಂದು ಹೇಳಿದರು.


ವಾಣಿಜ್ಯಶಾಸ್ತ್ರದ ಜೊತೆಗೆ ಒಂದಿಷ್ಟು ಕೌಶಲ್ಯವನ್ನು ಬೆಳೆಸಿಕೊಂಡರೆ ಮುಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಉತಮ್ಮ ಉದ್ಯೋಗ ಪಡೆದು ಸುಸ್ಥಿರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಕಾರ್ಯಗಾರಾಗಳಲ್ಲಿ ಭಾಗವಹಿಸುವುದರ ಜೋತೆಗೆ ಪಠ್ಯಕ್ರಮವನ್ನು ಪುನರಾವರ್ತಿಸಬೇಕು. ಎಂದು ಹೇಳಿದರು
ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಉನ್ನತ ಹುದ್ದೆಗೆ ಅವಕಾಶಗಳಿವೆ ಅವಗಳನ್ನು ಗಳಿಸಿ ಕೊಂಡು ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌತಮ್ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು ನಿರ್ದೇಶಕರು ಹಾಗೂ ಎರಡು ಕಾಲೇಜಿನ ಪ್ರಾಂಶುಪಾದರು ಬೋಧಕ ಬೋಧಿಕೆತರ ಸಿಬ್ಬಂದಿಯವರು ಹಾಜರಿದ್ದರು. ದಾವಣಗೆರೆ ನಗರದ ವಿವಿಧ ಕಾಲೇಜುಗಳ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!