ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

ಕನ್ನಡದಲ್ಲಿ ಸಾಕಷ್ಟು ಹಿಟ್ ಗೀತೆಗಳಿಗೆ ಧ್ವನಿಯಾಗಿರುವ, ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹೈದರಾಬಾದ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ.

ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ, ಹಿಂಬದಿಯಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಹಿಬ್ಬಂದಿ ನುಜ್ಜುಗುಜ್ಜಾಗಿದೆ. ಶಂಶಾಬಾದ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದ್ದು, ಮಂಗ್ಲಿ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!