ಅಪರ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ: ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿ ಗಳಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಪರ ಜಿಲ್ಲಾಧಿಕಾರಿಗಳ ಬೀಳ್ಕೊಡುಗೆ ಹಾಗೂ ನೂತನ ಅಪರ ಜಿಲ್ಲಾಧಿಕಾರಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಯ ಜೊತೆಗೆ ನಿಕಟ ಸಂಪರ್ಕವನ್ನು ಹೊಂದಿ, ಜಿಲ್ಲೆಗೆ ಒಳ್ಳೆಯ ಹೆಸರನ್ನು ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ಜಿಲ್ಲಾಡಳಿಕ್ಕೆ ಉತ್ತಮ ಹೆಸರು ಬರಲು ಪೂಜಾರ್ ವೀರಮಲ್ಲಪ್ಪ ಅವರು ಕಾರಣರಾಗಿದ್ದಾರೆ. ಕೋವಿಡ್ ಸಮಯದಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರು ಆದರೂ ಸಹ ಅಧಿಕಾರಿಗಳ ಜೊತೆಗೆ ಬೇರೆತು ಜಿಲ್ಲೆಯಲ್ಲಿ ಕೊವೀಡ್ ನಿಯಂತ್ರಣಕ್ಕಾಗಿ ಉತ್ತಮ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಜಿಲ್ಲೆಗೆ 2020 ರ ಜನವರಿಯಲ್ಲಿ ಮೊದಲು ಅಧಿಕಾರಕ್ಕೆ ಬಂದ ನಂತರ ಮಾನ್ಯ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ನಿರ್ವಹಿಸಿರುವ ತೃಪ್ತಿ ನನಗಿದೆ ಎಂದರು.

ಜಿಲ್ಲೆಯ ಅಧಿಕಾರಿಗಳೆಲ್ಲರೂ ಕುಟುಂಬದವರ ರೀತಿಯಲ್ಲಿ ಇದ್ದೆವು ಇಲ್ಲಿ ಬಿಟ್ಟು ಹೋಗ್ತಾ ಇರುವುದು ದುಃಖವಾಗಿದೆ. ಕಚೇರಿಯ ಸಿಬ್ಬಂದಿಗಳು ತಾವು ತೋರಿದ ಪ್ರೀತಿಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ. ಇಲ್ಲಿ ಬಹಳ ಅನುಭವಗಳನ್ನು ಪಡೆದು ನಿಮ್ಮೆಲ್ಲರ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದು ಭಾವುಕರಾದರು.
ನೂತನವಾಗಿ ಅಧಿಕಾರ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮಾತನಾಡಿ, ಮುಂಚೆ ಇದ್ದ ಅಧಿಕಾರಿಗಳಿಗೆ ಹೇಗೆ ಸಹಕರಿಸಿದ್ದಿರೋ ಹಾಗೆಯೇ ಮುಂದೆ ನನ್ನ ಜೊತೆಗೂ ಕೂಡ ಒಡನಾಟ ಹೀಗೆ ಇರಲಿ, ಎಲ್ಲರೂ ಸೇರಿ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸವನ್ನು ಮಾಡೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಯುಡಿಸಿ ಅಧಿಕಾರಿ ನಜ್ಮಾ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಹೊನ್ನಾಳಿ ತಹಶೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪಾಲಾಕ್ಷಿ ಅವರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ದೂಢಾ ಆಯುಕ್ತರಾದ ಕುಮಾರಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!