ಕೊಟ್ಟೂರು ಪಾದಯಾತ್ರಿಗಳಿಗೆ ಫೆ 13ರ ಸೋಮವಾರ ಬೀಳ್ಕೊಡುಗೆ

ಕೊಟ್ಟೂರು ಪಾದಯಾತ್ರಿ
ದಾವಣಗೆರೆ: ಇದೇ ಫೆ.16ರಂದು ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ರತೋತ್ಸವ ನಡೆಯುವ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಹೊರಡುವ ಪಾದಯಾತ್ರಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇದೇ 13ರ ಸೋಮವಾರ ಸಂಜೆ 5ಗಂಟೆಗೆ ನಗರದ ಶ್ರೀ ಗುರು ಬಕ್ಕೇಶ್ವರ ಮಹಾಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ಅಧ್ಯಕ್ಷ ಕಣಕುಪ್ಪಿ ಮುರುಗೇಶಪ್ಪ ಪತ್ರಿಕಾಗೋಷ್ಠಿಯಲ್ಲಿಂದು ಹೇಳಿದರು.
ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮೀಜಿ, ಕೂಡ್ಲಿಗಿ ಅಯ್ಯನಮಠ ಹಿರೇಮಠ ಶ್ರೀ ಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿ, ಕೊಟ್ಟೂರು ಮಹಲ್ ಮಠದ ಶ್ರೀ ಶಂಕರಸ್ವಾಮೀಜಿ, ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದು, ಕೈಗಾರಿಕೋದ್ಯಮಿ ಅಥಣಿ ವೀರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಶಾಸಕ ಶಾಮನೂರು ಶಿವಸಂಕರಪ್ಪ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸಿ.ಆರ್. ಬಸವರಾಜಪ್ಪ ಮಾತನಾಡಿ, ಅರಸೀಕೆರೆಯ ಶ್ರೀಗುರು ಕೋಲಶಾಂತೇಶ್ವರ ವಿರಕ್ತಮಠದಲ್ಲಿ ಫೆ.14ರಂದು 25ನೇ ಔಷಧೋಪಚಾರ ಸೇವಯೆಯ ಸಮಾರೋಪ ಸಮಾರಂಭ ನಡೆಯಲಿದೆ. ಅರಸೀಕೆರೆ ಶ್ರೀ ಗುರು ಕೋಲಶಾಂತೇಶ್ವರ ವಿರಕ್ತಮಠದ ಶ್ರೀ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ, ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಚಿದಾನಂದ, ಮಲ್ಲಾಬಾದಿ ಗುರುಬಸವರಾಜ್, ವಿನುತಾ ರವಿ, ಕಂಬಿನೂರು ರುದ್ರಬಸವರಾಜ್, ಬೂಸ್ನೂರು ಸುಜಾತ, ಜೋಳದ ಕೊಟ್ರಬಸಪ್ಪ ಉಪಸ್ಥಿತರಿದ್ದರು.