ದಾವಣಗೆರೆ ಕೆಇಬಿ ಕಚೇರಿ ಮುಂಭಾಗ ಪ್ರತಿಭಟನೆ
ದಾವಣಗೆರೆ: ಪ್ರತಿನಿತ್ಯ ಕೇವಲ ಎರಡು ಗಂಟೆಗಳ ಕಾಲ ವಿದ್ಯುತ್ ಪೂರೈಸುತ್ತಿದ್ದು, ಇದರಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ತಕ್ಷಣವೇ 7 ರಿಂದ 8 ತಾಸು ವಿದ್ಯುತ್ ಪೂರೈಸಬೇಕು ಎಂದು ರೈತರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಕೆಇಬಿ ಕಚೇರಿ ಮುಂಭಾಗ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ವಿದ್ಯುತ್ ಪಡೆಯುವುದು ನಮ್ಮ ಹಕ್ಕು. ಕರೆಂಟ್ ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ. ಇದರಲ್ಲಿ ಯಾವುದೇ ಉಪಕಾರವಿಲ್ಲ. ಸರಿಯಾದ ಸಮಯಕ್ಕೆ ವಿದ್ಯುತ್ ಪೂರೈಕೆಯಾಗದ ಕಾರಣ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟಿಸಿದರು.