ಫೆ. 8,ರಿಂದ ಜಾತ್ರೆ, ಹಂದರಕಂಬಕ್ಕೆ ಪೂಜೆ ಸಲ್ಲಿಸಿದ ಪ್ರಸನ್ನಾನಂದ ಶ್ರೀ ರಾಷ್ಟ್ರಪತಿಗೆ ಆಹ್ವಾನ
ಹರಿಹರ: ಫೆಬ್ರವರಿ 8 ಮತ್ತು 9 ರಂದು ರಾಜನ ಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ 5ನೇ ವರ್ಷದ ಜಾತ್ರೆಯ ವೇದಿಕೆ ಹಾಗೂ ಮಹಾಮಂಟಪ ನಿರ್ಮಾಣಕ್ಕೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ಭಾನುವಾರ ಹಂದರಕಂಬ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜಾತ್ರೆ ಸ್ವಾಭಿಮಾನದ ಸಂಕೇತವಾಗಿದೆ ಎಂದು ಹೇಳಿದರು. ಈ ಬಾರಿ ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು, ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಲಾಗಿದೆ ಎಂದರು.
ಜಾತ್ರಾ ಸಮಿತಿ ಅಧ್ಯಕ್ಷರಾದ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಎಲ್ಲರೂ ಸೇರಿ ಜಾತ್ರೆಯನ್ನು ಅರ್ಥಪೂರ್ಣವಾಗಿ ಮತ್ತು ಸಂಭ್ರಮದಿಂದ ಆಚರಿಸೋಣ, ಜಾತ್ರೆಯ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಎಂದು ರಾಮಚಂದ್ರ ಕೋರಿದರು. ಜಾತ್ರಾ ಸಮಿತಿ ಸಂಚಾಲಕ ಹಾಗೂ ಕೆ.ಪಿ.ಸಿ.ಸಿ. ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ. ಪಾಲಯ್ಯ ಇತರರು ಇದ್ದರು.