ಶಿವಮೊಗ್ಗದ ಯುವಕರು-ಮುಂಬೈ ಯುವತಿಯರ ನಡುವೆ ಜಗಳ: ಬಿಡಿಸಲು ಹೋದ ಪೊಲೀಸರ ಮೇಲೆ ಹಲ್ಲೆ

ದಾವಣಗೆರೆ: ಜಗಳ ಬಿಡಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದು, ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ಗಾಯವಾದ ಘಟನೆ ನಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಂಜುನಾಥ ಮತ್ತು ಹರ್ಷ ಎಂಬಿಬ್ಬರು ಮುಂಬೈನ ಇಬ್ಬರು ಯುವತಿಯರನ್ನು ಇವೆಂಟ್ ಮ್ಯಾನೇಜ್‌ಮೆಂಟ್ ಎಂದು ಕರೆಸಿ ದಾವಣಗೆರೆಗೆ ಕರೆದುಕೊಂಡು ಬಂದಿದ್ದರು.
ಯುವತಿಯರಿಗೆ ನೀಡಬೇಕಾದ ಹಣವನ್ನು ಕೊಡದೇ ಇದ್ದಿದ್ದರಿಂದ ಅವರ ನಡುವೆ ಜಗಳ ಉಂಟಾಗಿತ್ತು. ಜಗಳ ನಡೆಯುತ್ತಿದ್ದ ಮಾಹಿತಿ ತಿಳಿದ ವಿದ್ಯಾನಗರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಮಹಿಳಾ ಪೇದೆಗೆ ಗಾಯವಾಗಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.