ಟಿಕೆಟ್ ಸಿಗದ ಕಾರಣ ಬಿಜೆಪಿಗೆ ಫೈಟರ್ ರವಿ ರಾಜೀನಾಮೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ನಾಗಮಂಗಲದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿ ಆಲಿಯಾಸ್ ಬಿ.ಎಂ.ಮಲ್ಲಿಕಾರ್ಜುನಯ್ಯ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದರಿಂದ ಅಸಮಾಧಾನಗೊಂಡಿರುವ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗಮಂಗಲದಲ್ಲಿ ಬಿಜೆಪಿ ರವಿ ಬದಲಿಗೆ ಸಪ್ತಗಿರಿ ನಾಯ್ಕ್‌ಗೆ ಟಿಕೆಟ್ ಘೋಷಣೆ ಮಾಡಿದೆ. ಕಳೆದೆರಡು ವರ್ಷಗಳಿಂದ ಮಂಡ್ಯದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಫೈಟರ್ ರವಿ ಎಂಬುವವರು 2022ರ ನವೆಂಬರ್ 28ರಂದು ಸಚಿವ ಅಶ್ವತ್ಥ ನಾರಾಯಣ, ನಾರಾಯಣಗೌಡ, ಗೋಪಾಲಯ್ಯ ಅವರ ಸಮ್ಮುಖದಲ್ಲಿ ಮಂಡ್ಯದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇವರೊಂದಿಗೆ ಸುಮಲತಾ ಅವರ ಬೆಂಬಲಿಗ ಎನ್ನಲಾದ ಸಚ್ಚಿದಾನಂದ ಅವರು ಬಿಜೆಪಿ ಸೇರಿದ್ದರು.