ನಟಿ ತಾರಾ ಮೇಲೆ ಎಫ್‌ಐಆರ್ ದಾಖಲು

ನಟಿ ತಾರಾ ಮೇಲೆ ಎಫ್‌ಐಆರ್ ದಾಖಲು

ಬೆಂಗಳೂರು: ವೈಯಕ್ತಿಕವಾಗಿ ಸರ್ಕಾರಿ ವಾಹನ ಬಳಕೆ ಮಾಡಿಕೊಂಡ ಕಾರಣಕ್ಕಾಗಿ ಚಿತ್ರನಟಿ ತಾರಾ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಲಗಿದೆ.
ತಾರಾ ಅವರು ಸರ್ಕಾರಿ ಕಾರನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿ ಕೆಆರ್​ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಮಾಡಿ, ಫ್ಲೈಯಿಂಗ್ ಸ್ಕ್ವಾಡ್​ ಗಮನಕ್ಕೆ ತಂದಿದ್ದರು.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬರುವ ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ, ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ರಾಜಕಾರಣಿಗಳು ಸರ್ಕಾರಗ ವಾಹನ ಸೇರಿದಂತೆ ಹಲವು ಸವಲತ್ತುಗಳನ್ನು ಬಳಕೆ ಮಾಡಿಕೊಳ್ಳುವಂತಿಲ್ಲ.

 

Leave a Reply

Your email address will not be published. Required fields are marked *

error: Content is protected !!