Fire Death: ಅಮೆರಿಕಾದಿಂದ ಬಂದು ಒಂದೇ ದಿನಕ್ಕೆ ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ತಾಯಿ ಮಗಳು.!

 

ಬೆಂಗಳೂರು: ನಿನ್ನೆಯಷ್ಟೆ ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ತಾಯಿ, ಮಗಳಿಬ್ಬರು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿರುವ ಮನಕಲಕುವ ಘಟನೆ ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿ ನಡೆದಿದೆ.

ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಅಪಾರ್ಟ್ಮೆಂಟ್ ನ ಫ್ಲಾಟ್ ವೊಂದು ಹೊತ್ತಿ ಉರಿದಿದ್ದು, 82 ವರ್ಷದ ರೇಖಾ, 59 ವರ್ಷದ ಭಾಗ್ಯ ಬೆಂಕಿಗೆ ಆಹುತಿಯಾಗಿದ್ದು, ಓರ್ವ ವ್ಯಕ್ತಿಗೆ ಸುಟ್ಟ ಗಾಯಗಳಾಗಿವೆ.

ಆಶ್ರೀತ ಅಪಾರ್ಟ್ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಥಳಕ್ಕೆ ಮೂರು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿನೊಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!