ಅನುಮತಿ ಇಲ್ಲದೇ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ ಹಾಕಿದರೆ ದಂಡ ಬೀಳುತ್ತೆ ಜೋಕೆ: ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ

ದಾವಣಗೆರೆ: ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಎಲ್ಲೆಂದರಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಾವುಟ, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ನಿಯಮಾನುಸಾರ ದಂಡ ಹಾಗೂ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಎಚ್ಚರಿಕೆ ನೀಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ, ಖಾಸಗಿ, ಸಾರ್ವಜನಿಕ ಆಸ್ತಿಗಳ ಮೇಲೆ ವಿದ್ಯುತ್ ಕಂಬಗಳು, ಮಿಡಿಯನ್ಸ್, ಡಿವೈಡರ್ಸ್, ಕಲ್ವರ್ಟ್ಸ್, ರಸ್ತೆ ಬದಿ ಮರಗಳು, ಸರ್ಕಲ್‌ಗಳು ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯದೇ ನೇರವಾಗಿ, ಅನಧಿಕೃತವಾಗಿ, ಫ್ಲೆಕ್ಸ್, ಬ್ಯಾನರ್, ಬಾವುಟ, ಬಂಟಿಂಗ್ಸ್ ಗಳನ್ನು ಅಳವಡಿಸುತ್ತಿರುವುದು ಕಂಡುಬAದಿದ್ದು, ಇದು ಹೀಗೆ ಮುಂದುವರೆದರೆ ಕಾಯ್ದೆ ಪ್ರಕಾರ ಆರು ತಿಂಗಳು ಜೈಲು ಶಿಕ್ಷೆ ಅಥವಾ 1,000 ದಂಡ ಅಥವಾ ಎರಡೂ ರೀತಿಯ ದಂಡನೆಯನ್ನು ವಿಧಿಸಲು ಅವಕಾಶವಿರುವುದಾಗಿ ಎಚ್ಚರಿಕೆ ನೀಡಿದ್ದಾರೆ.