ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಏ.1ಕ್ಕೆ

ದಾವಣಗೆರೆ :ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈ ಟೆಕ್ ಎಜುಕೇಶನ್ ಕಾಲೇಜಿನ 2019-22 ನೇ ಸಾಲಿನ ಬ್ಯಾಚ್‌ನ ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವು ಏ.1 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್ ಎಸ್ ಬಡಾವಣೆಯಲ್ಲಿರುವ ಬಾಪೂಜಿ ಬಿ ಸ್ಕೂಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಟ್ಯಾಲಿ ಸಲ್ಯೂಷನ್ ಚೀಫ್ ಪೀಪಲ್ ಆಫೀಸರ್ ಎಸ್.ಜಿ. ನಾಗನಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ ಈಶ್ವರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ಬಿ. ವೀರಪ್ಪ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.