ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ; ಜವಹಾರ್ ಬಾಲ್  ಮಂಚ್ ನಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ

ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿ, ಮೇ.20 ರ ಇಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ನಿಂದ ಶುಭ ಹಾರೈಸಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಹಾಗೂ ಕಡಕ್ ಷಾ ವಲಿ ದರ್ಗಾದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿದ ಬಾಲಮಂಚ್ ನ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ, ದಾವಣಗೆರೆಯಲ್ಲಿ ನಡೆದ ಐತಿಹಾಸಿಕ ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಕಾರಣವಾಗಿದ್ದು, ಈ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಜಯ ಸಾಧಿಸಿದ ಎಲ್ಲಾ ನೂತನ ಶಾಸಕರುಗಳಿಗೆ ಅಭಿನಂದಿಸಿ ಮಧ್ಯಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಶ್ರಮವಹಿಸಿದ ಹಿರಿಯರಾದ ಡಾ.ಶಾಮನೂರು ಶಿವಶಂಕರಪ್ಪ ಅಥವಾ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಪ್ರಭಾವಿ ಖಾತೆಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಪಕ್ಷದ ಹೈಕಮಾಂಡಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್  ಪಕ್ಷದ ಮುಖಂಡರಾದ ರಾಜು ಭಂಡಾರಿ, ಹಾಲೇಶ್ ಎಂ, ಮಂಜುಸ್ವಾಮಿ ಕತ್ತಲಗೇರಿ, ಸುರೇಶ್ ಎಂ.ಜಾಧವ್, ಹೆಚ್. ಹರೀಶ್, ಬಿ.ಹಾಲೇಶ್, ಶಿಲ್ಪ ಪರಶುರಾಮ್,ಪ್ರೇಮಾ, ರಿಯಾಜುದ್ದೀನ್, ಧನಂಜಯ್ ಮತ್ತಿರರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!