ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು
ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಆರೋಪಿಗಳು ಕೆಎ – 38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ಸ್‌ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ವನಮಾರಪಳ್ಳಿ ಬಳಿ ಜಪ್ತಿ ಮಾಡಿದ್ದು, ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ., ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.