ವಿದೇಶದಿಂದ ದಾವಣಗೆರೆಗೆ ಬಂದವರಿಗೆ ಕಡ್ಡಾಯ ತಪಾಸಣೆ – ಡಾ.ಜಿ.ಡಿ.ರಾಘವನ್

ದಾವಣಗೆರೆ; ದಾವಣಗೆರೆಗೆ ಬರುವ ಪ್ರತೀ ವಿದೇಶಿಯರನ್ನು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಹಾಗೂ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.​ಡಿ. ರಾಘವನ್ ಅವರು ಹೇಳಿದ್ದಾರೆ..

ಕಳೆದ ಎರಡು ತಿಂಗಳುಗಳಿಂದ ಜಿಲ್ಲೆಗೆ ವಿದೇಶಿಯರು ಬರುವ ಯಾವುದೇ ಮಾಹಿತಿಗಳೂ ಬಂದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ನಮಗೆ ಮಾಹಿತಿ ನೀಡುತ್ತಿದ್ದಾರೆ. ಒಂದು ವೇಳೆ ವಿದೇಶಿಯರು ಜಿಲ್ಲೆಗೆ ಬಂದಿದ್ದೇ ಆದರೆ, ಅಂತಹವರ ಮೇಲೆ ನಿಗಾ ಇರಿಸಲಾಗುತ್ತದೆ ಎಂದು ಹೇಳಿದ್ದಾರೆ.

ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಬೆಂಗಳೂರು ಮತ್ತು ಇತರೆ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಸೋಂಕು ದೃಢಪಟ್ಟಿರುವುದು ಕಂಡು ಬಂದಿದ್ದೇ ಆದರೆ, ಅಂತಹವರಿಗೆ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ದಾವಣಗೆರೆಯಲ್ಲಿ ಸಂಗ್ರಹಿಸಿದ ನಿರ್ದಿಷ್ಟ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!