ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಇಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕೇಂದ್ರದ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ಎದುರಿಸಲಾಗದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಇಡಿಯನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಿಗ್ಗೆ11-30 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಹೊರಟು ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯಲಿದ್ದು, ಶಾಸಕರುಗಳಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಸಿ ವೇಣುಗೋಪಾಲ್, ಸೇರಿದಂತೆ ದಾವಣಗೆರೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರುಗಳು,ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಆದ ಕಾರಣ ಕಾಂಗ್ರೆಸ್ ಪಕ್ಷದ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸುವಂತೆ ಜಿಲ್ಲಾ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರುಗಳು ಕೋರಿದ್ದಾರೆ.

*ಕೆ.ಎಲ್.ಹರೀಶ್ ಬಸಾಪುರ.*

Leave a Reply

Your email address will not be published. Required fields are marked *

error: Content is protected !!