ಕಾಂಗ್ರೆಸ್ ಮಾಜಿ ಶಾಸಕ ತಿಮ್ಮಪ್ಪಹೆಗಡೆ ನಿಧನ

ಶಿವಮೊಗ್ಗ :ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್. ಟಿ. ತಿಮ್ಮಪ್ಪ ಹೆಗಡೆ ವಿಧಿವಶರಾದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
ಮಂಗಳವಾರ ಮುಂಜಾನೆ 94 ವರ್ಷದ ಎಲ್. ಟಿ. ತಿಮ್ಮಪ್ಪ ಹೆಗಡೆ ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
1978 ಮತ್ತು 1983ರಲ್ಲಿ ಸಾಗರ ಕ್ಷೇತ್ರದಿಂದ ಎಲ್. ಟಿ. ತಿಮ್ಮಪ್ಪ ಹೆಗಡೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು, ಹಲವಾರು ಸಂಘ-ಸಂಸ್ಥೆಗಳನ್ನು ಹುಟ್ಟು ಹಾಕಿದ್ದರು.
ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಡಸೂರು ಲಿಂಗದಹಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!